ಕುಂದಾಪುರ: ಅಂಬೇಡ್ಕರ್ ಅವರು ಸಂವಿಧಾನದ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿದು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿಯನ್ನು ನಮ್ಮೆಲ್ಲರಿಗೆ ಕೊಟ್ಟು ಹೋಗಿದ್ದಾರೆ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ಮಾನವ ಸರಪಳಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಕುಂದಾಪುರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ. ಸರ್ವಧರ್ಮಗಳು ಜಾತಿ ಮತ ಪಂಥಗಳನ್ನು ಸಾಮರಸ್ಯದಿಂದ ಕೊಂಡೊಯ್ಯುತ್ತಿರುವ ಭಾರತ ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಇನ್ನೂ ಗಟ್ಟಿಯಾಗಬೇಕು ಎಂದರು.
ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ ಸಂವಿಧಾನದ ಪೀಠಿಕೆ ಬೋಧಿಸಿದರು. ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿನಿಯರು ಸಮೂಹ ನೃತ್ಯದ ಮೂಲಕ ರಂಜಿಸಿದರು. ಸಭಾ ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ, ಪುರಸಭೆ ಮುಖ್ಯ ಅಧಿಕಾರಿ ಆನಂದಪ್ಪ, ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ ಹಾಗೂ ಹಿರಿಯರು ಭಾಗವಹಿಸಿದ್ದರು.ಅರಣ್ಯ ಇಲಾಖೆ ವತಿಯಿಂದ ಹೆದ್ದಾರಿ ಬದಿ ಗಿಡ ನೆಡಲಾಯಿತು.