ಜಿಲ್ಲೆ

ಸಾಹಿತ್ಯವಿಲ್ಲದೆ ಬದುಕಿಲ್ಲ : ಡಿ.ಯದುಪತಿ ಗೌಡ ಅಭಿಮತ

ವಿಜಯವಾಣಿ ಸುದ್ದಿಜಾಲ ಕೊಕ್ಕಡ

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಸರ್ಕಾರಿ ಪ್ರೌಢಶಾಲೆ ಅರಸಿನಮಕ್ಕಿ ಆಶ್ರಯದಲ್ಲಿ ಸಾಹಿತ್ಯ ಪ್ರೇರಣಾ ಕಾರ್ಯಕ್ರಮ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಕೊಕ್ಕಡ ಹೋಬಳಿ ಘಟಕದ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಶ್ರೀಕರ ರಾವ್ ಅಡ್ಕಾರಿ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಅಧ್ಯಕ್ಷ ಡಿ.ಯದುಪತಿ ಗೌಡ ಅಧ್ಯಕ್ಷತೆ ವಹಿಸಿ, ಸಾಹಿತ್ಯ ನಿರಂತರ ಪ್ರಕ್ರಿಯೆ, ಸಾಹಿತ್ಯವಿಲ್ಲದೆ ಬದುಕಿಲ್ಲ. ಸಾಹಿತ್ಯಕ್ಕೆ ಮೂಲ ಜನಪದ. ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಮೊಳಕೆಯೊಡೆಯಲಿ ಎಂದರು.

ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ರಾಮಕೃಷ್ಣ ಭಟ್ ಚೊಕ್ಕಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿಯ ಅಧ್ಯಕ್ಷೆ ರೇಣುಕಾ ಸುಧೀರ್, ಮುಖ್ಯಶಿಕ್ಷಕ, ಶಿಕ್ಷಕರು, ಸಿಬ್ಬಂದಿ ಹಾಗೂ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.