ಜಿಲ್ಲೆ

ಕಾಸರಗೋಡು ಪ್ರೆಸ್‌ಕ್ಲಬ್ ಕಟ್ಟಡ ಉದ್ಘಾಟನೆ

ಕಾಸರಗೋಡು: ನವೀಕರಿಸಲಾದ ಕಾಸರಗೋಡು ಪ್ರೆಸ್‌ಕ್ಲಬ್‌ನ ಕಟ್ಟಡವನ್ನು ಶನಿವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್‌ಲೈನ್ ಮೂಲಕ ಉದ್ಘಾಟಿಸಿದರು.

ಲೋಕೋಪಯೋಗಿ ಖಾತೆ ಸಚಿವ ಪಿ.ಎ.ಮುಹಮ್ಮದ್ ರಿಯಾಜ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎನ್.ಎ.ನೆಲ್ಲಿಕುನ್ನು, ಇ ಸಿ.ಎಚ್.ಕುಞಂಬು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ, ನಗರಸಭಾ ಪ್ರತಿಪಕ್ಷ ಮುಖಂಡ ರಮೇಶ್, ಪತ್ರಕರ್ತರ ಸಂಘದ ರಾಜ್ಯ ಸಮಿತಿ ಅದ್ಯಕ್ಷೆ ಎ.ವಿ ವಿನೀತಾ, ಕಾರ್ಯದರ್ಶಿ ಆರ್.ಕಿರಣ್ ಬಾಬು, ಮಾಧ್ಯಮ ಅಕಾಡೆಮಿಯ ಸುಭಾಷ್ ಇ., ಕಾಸರಗೋಡು ಜಿಪಂ ಉಪಾಧ್ಯಕ್ಷ ಶಾನವಾಜ್ ಪಾದೂರು, ವಾರ್ತಾಧಿಕಾರಿ ಎಂ.ಮಧುಸೂದನನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿಲಾಫಲಕವನ್ನು ಶಾಸಕ ಎನ್.ಎ.ನೆಲ್ಲಿಕುನ್ನು ಅನಾವರಣಗೊಳಿಸಿದರು. ಪ್ರೆಸ್‌ಕ್ಲಬ್ ಅಧ್ಯಕ್ಷ ಮಹಮ್ಮದ್ ಹಾಶಿಂ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶಿರೂರಿನಲ್ಲಿ ಲಾರಿ ಚಾಲಕ ಅರ್ಜುನ್ ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಮಾಧ್ಯಮದವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶೈಜು ಪಿಲಾತ್ತರ ನಿರೂಪಿಸಿದರು. ಕೆ.ವಿ.ಪದ್ಮೇಶ್ ವಂದಿಸಿದರು.

ಮಾಧ್ಯಮ ವಿಚಾರ ಸಂಕಿರಣದಲ್ಲಿ ಹಿರಿಯ ಪತ್ರಕರ್ತ ಪಿ.ವಿ.ಶಶೀಂದ್ರನ್ ಉಪನ್ಯಾಸ ನಡೆಸಿದರು. ಪತ್ರಕರ್ತ ವಿನೋದ್ ಪಾಯಂ ಮೋಡರೇಟರ್ ಆಗಿ ಸಹಕರಿಸಿದರು. ಪ್ರೆಸ್‌ಕ್ಲಬ್ ಅಧ್ಯಕ್ಷ ಮಹಮ್ಮದ್ ಹಾಶಿಂ, ಪ್ರದೀಪ್ ನಾರಾಯಣ್, ನಹಾಸ್ ಉಪಸ್ಥಿತರಿದ್ದರು.