ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್‌ನ ಶಿಕ್ಷಣ ಸಂಸ್ಥೆ ತೊಕ್ಕೊಟ್ಟುವಿನ ಮಂಗಳೂರು ವನ್ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಗ್ರಂಥಾಲಯ ಉದ್ಘಾಟಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿದರು. 
ಜಿಲ್ಲೆ

ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಗ್ರಂಥಾಲಯ ಉದ್ಘಾಟನೆ

ಮಂಗಳೂರು : ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್‌ನ ಶಿಕ್ಷಣ ಸಂಸ್ಥೆ ತೊಕ್ಕೊಟ್ಟುವಿನ ಮಂಗಳೂರು ವನ್ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಗ್ರಂಥಾಲಯ ಉದ್ಘಾಟನೆ ಮತ್ತು ಗ್ರಂಥಾಲಯ ದಿನಾಚರಣೆ ಕಾರ್ಯಕ್ರಮವು ಜರಗಿತು.

ಗ್ರಂಥಾಲಯ ಉದ್ಘಾಟಿಸಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಬದುಕಿನಲ್ಲಿ ಓದಿಗೆ ಅತ್ಯಂತ ಮಹತ್ವವಿದೆ. ಎಳೆಯ ಪ್ರಾಯದಲ್ಲೇ ಶಾಲೆಯ ಪಠ್ಯದ ಜತೆಗೆ ಪತ್ರಿಕೆ ಹಾಗೂ ಉಪಯುಕ್ತ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇತರ ಮನರಂಜನೆಯ ಆಕರ್ಷಣೆಗೆ ಒಳಗಾಗದೆ ಓದಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್, ಉಪ ಪ್ರಾಂಶುಪಾಲೆ ನಯನ, ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಪ್ರಖ್ಯಾತ್ ರೈ ಉಪಸ್ಥಿತರಿದ್ದರು. ಭಾರತದ ಗ್ರಂಥಾಲಯ ವಿಜ್ಞಾನ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ಅವರ ಕೊಡುಗೆ ಬಗ್ಗೆ ವಿದ್ಯಾರ್ಥಿ ಗೌರವ್ ಮಾತನಾಡಿದರು. ಶಾಲಾ ಗ್ರಂಥಪಾಲಕಿ ನೀತಾ ಕುಮಾರಿ ಸ್ವಾಗತಿಸಿ, ರಮ್ಯ ವಂದಿಸಿದರು. ಮಮತ ಕಾರ್ಯಕ್ರಮ ನಿರೂಪಿಸಿದರು.