ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂದ ಸುವರ್ಣ ಮಹೋತ್ಸವದ ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ಪರಿಶ್ರಮ ಉದ್ಘಾಟನಾ ಸಮಾರಂಭ ಸೆ.23 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲ ಬೆಂಗಳೂರು ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸಭಾಧ್ಯಕ್ಷತೆ ವಹಿಸಿ ಮತ್ತು ಬ್ಯಾಂಕಿಂಗ್ ವಿಭಾಗ ಉದ್ಘಾಟಿಸಲಿದ್ದಾರೆ.
ಸಚಿವ ಕೆ.ಎನ್.ರಾಜಣ್ಣ ಕಟ್ಟಡ ಉದ್ಘಾಟಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ರಸಗೊಬ್ಬರ ವಿಭಾಗ ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷ ಯು.ಟಿ.ಖಾದರ್ ಆಡಳಿತ ವಿಭಾಗ (ನಿರ್ದೇಶಕರು ಸಭಾ ಕೊಠಡಿ) ಉದ್ಘಾಟಿಸಲಿದ್ದು, ಶಾಸಕ ಹರೀಶ್ ಪೂಂಜಾ ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ. ಸಾಮಾನ್ಯ ಸೇವಾ ಕೇಂದ್ರವನ್ನು ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್ ಉದ್ಘಾಟಿಸಲಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಭಾಂಗಣ ಮತ್ತು ಲಿಫ್ಟ್ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ.ಸೋಜ ಪಡಿತರ ವಿಭಾಗ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್, ಕೆ. ಹರೀಶ್ ಕುಮಾರ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎಂ ರಘು ಪುತ್ತೂರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕ ಪೂವಾಜೆ ಕುಶಾಲಪ್ಪ ಗೌಡ ಭಾಗವಹಿಸಲಿದ್ದಾರೆ.
ಮಾಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುನೀತ್ ಕುಮಾರ್, ಶ್ರೀ ಕ್ಷೇತ್ರ ಪಾರೆಂಕಿಯ ಪ್ರಧಾನ ಅರ್ಚಕ ಪೇಜಾವರ ಟಿ.ವಿ ಶ್ರೀಧರ್ ರಾವ್, ಮಡಂತ್ಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ, ಕೊಳ್ಪೆದಬೈಲು ಮೊಹಿಯುದ್ದೀನ್ ಮಸ್ಜಿದ್ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬ್, ಮಡಂತ್ಯಾರು ಸೆಕ್ರೆಡ್ ಹಾರ್ಟ್ ಚರ್ಚ್ನ ಪ್ರಧಾನ ಧರ್ಮಗುರು ಡಾ. ಸ್ಟಾನಿ ಗೋವಿಯಸ್, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಅರವಿಂದ್ ಜೈನ್, ಉಪಾಧ್ಯಕ್ಷೆ ಧನಲಕ್ಷಿ$್ಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿ ಸೋಜ, ಆಡಳಿತ ನಿರ್ದೇಶಕರಾದ ಕುಮಾರ್ ನಾಯ್ಕ್, ಅಬ್ದುಲ್ ರಹಿಮಾನ್ ಪಡ್ಪು, ಬಿ. ಪದ್ಮನಾಭ ಸಾಲ್ಯಾನ್, ಎಚ್. ಧರ್ಣಪ್ಪ ಗೌಡ, ಕಿಶೋರ್ ಕುಮಾರ್ ಶೆಟ್ಟಿ, ಜೋಯೆಲ್ ಗಾಡ್ ಮೆಂಡೋನ್ಸಾ, ತುಳಸಿ ಜಿ.ಪೂಜಾರಿ, ಉಷಾಲತಾ, ರಮೇಶ್ ಸಿರಾಜುದ್ದೀನ್ (ವಲಯ ಮೇಲ್ವಿಚಾರಕರು) ಮೊದಲಾದವರು ಭಾಗವಹಿಸಲಿದ್ದಾರೆ.
ಬೆಳಗ್ಗೆ 8ರಿಂದ ಸಭಾ ಕಾರ್ಯಕ್ರಮ ಆರಂಭದವರೆಗೆ ಖ್ಯಾತ ಅಂತರಾಷ್ಟ್ರೀಯ ಕಲಾವಿದ ಮತ್ತು ಹೊನ್ನಪ್ಪ ದೇವಾಡಿಗ ಬಳ್ಳಮಂಜ ಹಾಗೂ ತಂಡದವರಿಂದ ನಾದ ವೈವಿಧ್ಯ ನಡೆಯಲಿದೆ. ಸಂಜೆ 6.30ರಿಂದ ಕಲಾಸಂಗಮ ಕಲಾವಿದರ ವಿಜಯ್ ಕುಮಾರ್ ಕೊಡಿಯಾಲ್ಬೈಲ್ ರಚಿಸಿ ನಿರ್ದೇಶಿಸಿರುವ ತುಳು ಸಾಮಾಜಿಕ ನಾಟಕ ಮೈತಿದಿ ಪ್ರದರ್ಶನಗೊಳ್ಳಲಿದೆ.