ಮೈಸೂರು: ವಿಜಯನಗರ 2ನೇ ಹಂತದಲ್ಲಿರುವ ಕೊಡಗು ಗೌಡ ಸಮಾಜದ ಕಟ್ಟಡದ ನೂತನ ಸಭಾಂಗಣವನ್ನು ಡಿ.23ರಂದು ಉದ್ಘಾಟಿಸಲಾಗುವುದು ಎಂದು ಸಮಾಜದ ಅಧ್ಯಕ್ಷ ತೋಂಟಬೈಲು ಈ.ಮನೋಹರ್ ತಿಳಿಸಿದರು.
ಅಂದು ಬೆಳಗ್ಗೆ 9.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ಆದಿಚುಂಚನಗಿರಿ ಮಠದ ಮೈಸೂರು ಶಾಖೆಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಹರೀಶ್‌ಗೌಡ, ಮಾಜಿ ಶಾಸಕರಾದ ಎಲ್.ನಾಗೇಂದ್ರ, ವಾಸು, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೆ.ವಿ.ಶ್ರೀಧರ್ ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ದಶಕಗಳ ಹಿಂದೆ ಕೊಡಗಿನಿಂದ ನಗರಕ್ಕೆ ವಿವಿಧ ಕಾರಣಗಳಿಂದ ಆಗಮಿಸಿದವರು ದಾನಿಗಳಿಂದ ದೇಣಿಗೆ ಸಂಗ್ರಹಿಸಿ, ತಾವೂ ಕೊಡುಗೆ ನೀಡಿ ಕಟ್ಟಡ ನಿರ್ಮಿಸಿದ್ದಾರೆ. ಈಗ ಅದೇ ರೀತಿ ನೂತನ ಸಭಾಂಗಣ ನಿರ್ಮಿಸಲಾಗಿದೆ. ಇದರಿಂದ ಸಮಾಜದ ಕಾರ್ಯಚಟವಟಿಕೆಗಳನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರಿಯಾಗಲಿದೆ ಎಂದರು.
ಪದಾಧಿಕಾರಿಗಳಾದ ಕುಂಟಿಕಾನ ಎಸ್.ಗಣಪತಿ, ಕಾಳೇರಮ್ಮನ ಎಂ.ನಾಣಯ್ಯ ಇತರರು ಇದ್ದರು.