ಮಡಿಕೇರಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾ ಘಟಕದ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ಆ.೨೫ ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತಿರ.ಪಿ.ಸೋಮಣ್ಣ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.೨೫ ರಂದು ಬೆಳಗ್ಗೆ ೯.೩೦ ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ನೆರವೇರಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಮಾಜಿ ಸೈನಿಕರು ಪಾಲ್ಗೊಂಡು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಸಂಚಾಲಕರಾದ ಪಿ.ಎಸ್.ವಾಸು, ಚಂದನ, ಪಿ.ಕೆ.ಕುಟ್ಟಪ್ಪ, ಸಿ.ಜಿ.ತಿಮ್ಮಯ್ಯ ಉಪಸ್ಥಿತರಿದ್ದರು.