ಜಿಲ್ಲೆ

ಜ.26 ರಂದು ಸಂವಿಧಾನ ಪೀಠಿಕೆ ಉದ್ಘಾಟನೆ

ಬಳ್ಳಾರಿ : 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜ.26 ರಂದು ಬೆಳಗ್ಗೆ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಗ್ರೆನೇಟ್ ಕಲ್ಲಿನಲ್ಲಿ ಕೆತ್ತನೆ ಮಾಡಲಾದ 10*7 ಅಡಿಯ ಭಾರತದ ಸಂವಿಧಾನ ಪೀಠಿಕೆಯನ್ನು ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಉದ್ಘಾಟಿಸುವರು.

ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ಇತರೆ ಸರ್ಕಾರೇತರ, ಸಂಘ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದ್ದಾರೆ.