ಜಿಲ್ಲೆ

ಯೋಜನೆಗಳ ಉದ್ಘಾಟನೆ ನಾಳೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಅಮೃತ ಭಾರತ ಸ್ಟೇಷನ್​ ಯೋಜನೆಯಡಿ ಪುನರಾಭಿವೃದ್ಧಿಗೊಂಡ ದೇಶದ ರೈಲ್ವೆ ನಿಲ್ದಾಣಗಳ ಮತ್ತು ಇತರ ಯೋಜನೆಗಳ ಉದ್ಘಾಟನಾ ಸಮಾರಂಭವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್​ ಮೂಲಕ ಮೇ 22ರಂದು ಬೆಳಗ್ಗೆ 10.30ಕ್ಕೆ ಉದ್ಘಾಟಿಸುವರು. ಧಾರವಾಡ ರೈಲು ನಿಲ್ದಾಣದಲ್ಲಿ ಸಮಾರಂಭ ಆಯೋಜಿಸಲಾಗಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ.