ಜಿಲ್ಲೆ

ಫೆ.22ರಂದು ಕೊಡಿಯಾಲದಲ್ಲಿ ರಾಮಮಂದಿರ ಲೋಕಾರ್ಪಣೆ: ಪದ್ಮಶಾಲಿ ಶ್ರೀರಾಮ ಚಾರಿಟಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಹೇಳಿಕೆ

ಮಂಡ್ಯ: ಪದ್ಮಶಾಲಿ ಶ್ರೀರಾಮ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಫೆ.22ರಂದು ಶ್ರೀರಂಗಪಟ್ಟಣ ತಾಲೂಕು ಕೊಡಿಯಾಲ ಗ್ರಾಮದಲ್ಲಿ ಶ್ರೀರಾಮಮಂದಿರ ಲೋಕಾರ್ಪಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ಅವರ ಸಾನ್ನಿಧ್ಯದಲ್ಲಿ ನಡೆಯಲಿರುವ ಲೋಕಾರ್ಪಣೆ ಕಾರ್ಯಕ್ರಮವನ್ನು ಮೈಸೂರು ರಾಜವಂಶಸ್ಥ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಲಿಸದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮೈಸೂರಿನ ಉಪನ್ಯಾಸಕ ಡಾ.ವಿಜಯ್‌ರಾಜ್ ಮುಖ್ಯ ಭಾಷಣ ಮಾಡಲಿದ್ದು, ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಮುಖಂಡ ಇಂಡುವಾಳು ಎಸ್.ಸಚ್ಚಿದಾನಂದ, ಕೊಡಿಯಾಲ ಗ್ರಾಪಂ ಅಧ್ಯಕ್ಷೆ ಯಶೋದಮ್ಮ ಸಿದ್ದರಾಜು, ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಕೆಂಪಲಿಂಗೇಗೌಡ, ಪದ್ಮಶಾಲಿ ಸಂಘದ ಅಧ್ಯಕ್ಷ ಸಿ.ನಾರಾಯಣಯ್ಯ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಟ್ರಸ್ಟ್‌ನ ಕಾರ್ಯದರ್ಶಿ ನಾಗಾನಂದ ಹಾಜರಿದ್ದರು.