ಗ್ರಾಮೀಣ ಆಟಗಳ ಕ್ರೀಡಾಕೂಟ ಆಡುಂಬೊಲದಲ್ಲಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇಸಿಒ ರಾಜ ಖಾರ್ವಿ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಕಾರ್ಯದರ್ಶಿ ಎನ್.ಸದಾಶಿವ ನಾಯಕ್, ಪ್ರಾಂಶುಪಾಲೆ ಕವಿತಾ ಎಂ.ಸಿ. ಮತ್ತಿತರರಿದ್ದರು.  
ಜಿಲ್ಲೆ

ಕ್ರೀಡೆಗಳಿಂದ ಆರೋಗ್ಯ, ಸೃಜನಶೀಲತೆ ವೃದ್ಧಿ

ಗಂಗೊಳ್ಳಿ: ಗ್ರಾಮೀಣ ಕ್ರೀಡೆಗಳು ಮಕ್ಕಳಲ್ಲಿ ಆರೋಗ್ಯ ಮತ್ತು ಸೃಜನಶೀಲತೆ ಹೆಚ್ಚಿಸಲು ನೆರವಾಗುತ್ತವೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇಸಿಒ ರಾಜ ಖಾರ್ವಿ ಹೇಳಿದರು.

ಜಿಎಸ್‌ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಗಂಗೊಳ್ಳಿಯ ಎಸ್.ವಿ.ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಗ್ರಾಮೀಣ ಆಟಗಳ ಕ್ರೀಡಾಕೂಟ ‘ಆಡುಂಬೊಲ’ ಉದ್ಘಾಟಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಕಾರ್ಯದರ್ಶಿ ಎನ್.ಸದಾಶಿವ ನಾಯಕ್, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಕವಿತಾ ಎಂ.ಸಿ., ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್, ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಬಹುಮಾನ ವಿತರಿಸಿದರು. ಬಾಲಕಿಯರ ವಿಭಾಗದಲ್ಲಿ ಎಸ್.ವಿ ಟೈಟಾನ್ಸ್, ಬಾಲಕರ ವಿಭಾಗದಲ್ಲಿ ಎಸ್.ವಿ ರೇಂಜರ್ಸ್ ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು. ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ವಂದಿಸಿದರು.