ಜಿಲ್ಲೆ

ಸೇವಾ ಮನೋಭಾವ ಬೇಳೆಸಿಕೊಳ್ಳಲು ಸಹಕಾರಿ : ಜಯಸೂರ್ಯ ರೈ ಮಾದೋಡಿ ಹೇಳಿಕೆ

ಕಡಬ: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕಬ್ಸ್, ಬುಲ್-ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಘದ ಉದ್ಘಾಟನೆ ಇತ್ತೀಚೆಗೆ ನಡೆಯಿತು.

ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಧ್ವಜಾರೋಹಣ ಮಾಡಿ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಸಂಘಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೀವನದಲ್ಲಿ ಶಿಸ್ತು, ತಾಳ್ಮೆ, ಆತ್ಮಸ್ಥೈರ್ಯ, ಸೇವಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಸತ್ಪ್ರಜೆಯಾಗಿ ಬಾಳಬೇಕು ಎಂದರು.

ತರಬೇತುದಾರ ಪಂಜ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ದಾಮೋದರ ನೇರಳ, ಸಂಘಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ವಿದ್ಯಾರ್ಥಿಗಳು ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಎದೆಗುಂದದೆ ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ಸಮಾಜಕ್ಕೆ ಮಾದರಿಯಾಗಬೇಕು ಎಂದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ, ಉಪಾಧ್ಯಕ್ಷೆ ಜ್ಞಾನೇಶ್ವರಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಆಂಗ್ಲ ಮಾಧ್ಯಮದ ಮುಖ್ಯಶಿಕ್ಷಕ ನಾರಾಯಣ ಭಟ್, ಕನ್ನಡ ಮಾಧ್ಯಮದ ಮುಖ್ಯಶಿಕ್ಷಕ ವಿನಯ ವಿ.ಶೆಟ್ಟಿ, ಶಿಕ್ಷಕಿ ಸವಿತಾ ಕೆ. ಶುಭ ಹಾರೈಸಿದರು.

ಶಾಲಾ ಆಡಳಿತ ಮಂಡಳಿಯ ಟ್ರಸ್ಟಿ ಹರಿಚರಣ್ ರೈ ಮಾದೋಡಿ, ಸಹ ಆಡಳಿತಾಧಿಕಾರಿ ಹೇಮಾನಾಗೇಶ್ ರೈ, ಆಂಗ್ಲ ಮಾಧ್ಯಮದ ಸಹಮುಖ್ಯಸ್ಥೆ ಅನಿತಾ ಜೆ.ರೈ ಮತ್ತು ಪಾಲಕರು ಉಪಸ್ಥಿತರಿದ್ದರು. ಲೀಡರ್ ಸುಚೇತ ಸ್ವಾಗತಿಸಿದರು. ಕಬ್ ಮಾಸ್ಟರ್ ರಚನಾ ವಂದಿಸಿದರು. ಗೈಡ್ ಕ್ಯಾಪ್ಟನ್ ವನಿತಾ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.