ಸುಬ್ರಹ್ಮಣ್ಯ: ಆಧ್ಯಾತ್ಮಿಕ ಹಿನ್ನೆಲೆಯುಳ್ಳ ಶಿಕ್ಷಣ ಮಾನವನ ಅಭ್ಯುದಯಕ್ಕೆ ಅಡಿಗಲ್ಲಾಗುತ್ತದೆ ಎಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಆಡಳಿತದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಮತ್ತು ವೇದವ್ಯಾಸ ವಿದ್ಯಾಲಯಗಳಿಗೆ 45 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀವಿದ್ಯಾ ಸಭಾಭವನವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ವಿದ್ಯಾಲಯದ ಸಂಚಾಲಕ ಸುದರ್ಶನ ಜೋಯಿಸ, ನಿವೃತ್ತ ಪ್ರಾಂಶುಪಾಲ ಬಿ.ವಿ.ಸೂರ್ಯನಾರಾಯಣ ಭಟ್, ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ಸಂಚಾಲಕ ನಾರಾಯಣ ಭಟ್ ಟಿ, ನಿವೃತ್ತ ಮುಖ್ಯಶಿಕ್ಷಕ ಗೋಪಾಲಕೃಷ್ಣ ಬಿ, ಗಣಪತಿ ಭಟ್ ಮುಖ್ಯ ಅತಿಥಿಗಳಾಗಿದ್ದರು. ಆಡಳಿತ ಮಂಡಳಿ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ ಪಿ, ಪ್ರೌಢಶಾಲಾ ಮುಖ್ಯಶಿಕ್ಷಕ ಸತ್ಯಶಂಕರ ಭಟ್ ಎಂ, ವೇದವ್ಯಾಸ ವಿದ್ಯಾಲಯದ ಮುಖ್ಯಶಿಕ್ಷಕ ಪ್ರಶಾಂತ್.ಬಿ, ಗೋಪಾಲಕೃಷ್ಣ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕುಶಾಲಪ್ಪ, ವೇದವ್ಯಾಸ ವಿದ್ಯಾಲಯದ ಪಿಟಿಎ ಅಧ್ಯಕ್ಷ ಕೇಶವ ಗೌಡ ಉಪಸ್ಥಿತರಿದ್ದರು.
ಸಭಾಭವನ ನಿರ್ಮಿಸಿದ ಅಭಿಯಂತರಾದ ಸಚ್ಚಿದಾನಂದ ಪುತ್ತೂರು, ಗಿರಿಯಪ್ಪ ಬಿಳಿನೆಲೆ, ಗುತ್ತಿಗೆದಾರ ವಿನಯ್ ವಿಟ್ಲ, ಪ್ರಮುಖರಾದ ಮಂಜುನಾಥ ಬನ್ನೂರು ಅವರನ್ನು ಗೌರವಿಸಲಾಯಿತು. ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ವಿನಯ ಕುಮಾರ್ ಕೆ.ಜೆ ಕಾರ್ಯಕ್ರಮ ನಿರೂಪಿಸಿದರು.