ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ವಿದ್ಯಾರ್ಥಿ ಸಂಘ ಉದ್ಘಾಟಿಸಿದರು. ಪ್ರಾಂಶುಪಾಲೆ ಜಾಲಿ ಡಿಸೋಜ, ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ ಇದ್ದರು.  
ಜಿಲ್ಲೆ

ನಾಯಕತ್ವಕ್ಕೆ ಧೈರ್ಯ ಅಗತ್ಯ: ಅನಂತ ಭಟ್ ಮಚ್ಚಿಮಲೆ ಅನಿಸಿಕೆ

ಬೆಳ್ತಂಗಡಿ: ಮುಂಡಾಜೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸೋಮವಾರ ನಡೆಯಿತು.

ಬೆಳ್ತಂಗಡಿ ರೋಟರಿ ಕ್ಲಬ್‌ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾತನಾಡಿ, ನಾಯಕರಾಗಲು ಪ್ರಮುಖವಾಗಿ ಧೈರ್ಯ ಬಹಳ ಅಗತ್ಯ. ವಿದ್ಯಾರ್ಥಿಗಳು ತಾವು ಕಲಿತ ವಿದ್ಯಾಸಂಸ್ಥೆಯನ್ನು ಎಂದಿಗೂ ಮರೆಯಬಾರದು ಎಂದರು.

ಕಾಲೇಜಿನ ಪ್ರಾಂಶುಪಾಲೆ ಜಾಲಿ ಡಿಸೋಜ ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ ಬೋಧಿಸಿದರು.

ಮುಂಡಾಜೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ನಾರಾಯಣ ಗೌಡ ಕೊಳಂಬೆ ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಸಲಹೆಗಾರ ಪುರುಷೋತ್ತಮ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ವಸಂತಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಪದ್ಮನಾಭ ಬಿ.ಕೆ. ವಂದಿಸಿದರು.