ಜಿಲ್ಲೆ

ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನೆ

ಕಾರ್ಕಳ: ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಆಫ್-ಕ್ಯಾಂಪಸ್ ಕೇಂದ್ರವಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲ ತನ್ನ ಕ್ಯಾಂಪಸ್‌ನಲ್ಲಿ ಜಪಾನ್‌ನ ಟಿಕೆ ಇಂಜಿನಿಯರಿಂಗ್ ಸಹಭಾಗಿತ್ವದಲ್ಲಿ ಸ್ಥಾಪಿಸಲಾದ ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನೆ ಇತ್ತೀಚೆಗೆ ನಡೆಯಿತು.

ನಿಟ್ಟೆ ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಪಾನ್‌ನ ಟಿಕೆ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಸಿಇಒ ಯುಟಾಕಾ ಶಿಮೊಮುರಾ, ಕಾರ್ಯನಿರ್ವಾಹಕ ವ್ಯವಸ್ಥಾಪಕ ನಿರ್ದೇಶಕ ಜುನಿಚಿ ಗೋಯಾ, ಟಿಕೆ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಕಾರ್ಪೊರೇಟ್ ಸಲಹೆಗಾರ ಕೆಂಜಿ ಯಮಡಾ, ಎನ್‌ಎಂಎಎಂಐಟಿ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲೂಣ್ಕರ್, ನಿಟ್ಟೆ ಡಿಯು ಅಂತಾರಾಷ್ಟ್ರೀಯ ಸಂಬಂಧಗಳ ನಿರ್ದೇಶಕ ಪ್ರೊ.ಹರಿಕೃಷ್ಣ ಭಟ್, ಸಲಹೆಗಾರ ರಾಘವೇಂದ್ರ ಪೈ ಉಪಸ್ಥಿತಿತರಿದ್ದರು.