ಸುಳ್ಯ: ತಾಲೂಕಿನ ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಧವಳಧಾರೆ’ ಉದ್ಘಾಟನೆ ಮಂಗಳವಾರ ನಡೆಯಿತು. ದ.ಕ. ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ ನೂತನ ಕಟ್ಟಡ ಉದ್ಘಾಟಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ದೇಣಿಗೆ ನೀಡಿದರು.
ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಆರ್ಕಜೆ, ಸವಿತಾ ಎನ್.ಶೆಟ್ಟಿ, ದ.ಕ. ಜಿಲ್ಲಾ ಹಾಲು ಒಕ್ಕೂಟದ ಶೇಖರಣೆ ಮತ್ತು ತಾಂತ್ರಿಕ ವಿಭಾಗದ ವ್ಯವಸ್ಥಾಪಕ ರವಿರಾಜ ಉಡುಪ, ಉಪವ್ಯವಸ್ಥಾಪಕ ಡಾ.ಸತೀಶ್ ರಾವ್, ಸುಳ್ಯ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ನಿತಿನ್ ಪ್ರಭು, ಮಂಡೆಕೋಲು ಗ್ರಾಪಂ ಅಧ್ಯಕ್ಷ ಕುಶಲ ಉದ್ದಂತಡ್ಕ, ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್, ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷ ರಾಮಕೃಷ್ಣ ರೈ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ಉಪತಹಸೀಲ್ದಾರ್ ಚಂದ್ರಕಾಂತ್ ಎಂ.ಆರ್, ನೂತನ ಕಟ್ಟಡ ಸಮಿತಿಯ ತಾಂತ್ರಿಕ ಸಲಹೆಗಾರ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಮುಖ್ಯ ಅತಿಥಿಗಳಾಗಿದ್ದರು.
ಸಂಘದ ಅಧ್ಯಕ್ಷ ಸದಾನಂದ ಮಾವಜಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಪುಷ್ಪಾವತಿ ಎಂ. ವರದಿ ಮಂಡಿಸಿದರು. ಸುರೇಶ್ ಕಣೆಮರಡ್ಕ ಕಾರ್ಯಕ್ರಮ ನಿರೂಪಿಸಿದರು.