ಚಿಕ್ಕಮಗಳೂರು: ಸಮಾನಪತ್ತಿನ ಸೌಹಾರ್ಧ ಸಹಕಾರಿ ಸಂಘವು ಕಳೆದ ೧೦ ವರ್ಷಗಳಲ್ಲಿ ಸ್ವಂತ ಕಟ್ಟಡ ಹೊಂದಿ ಇತರೆ ಸಂಘಗಳಿಗೆ ಮಾದರಿಯಾಗಿದೆ ಎಂದು ಶಾಸಕ ಎಚ್.ಡಿ ತಮ್ಮಯ್ಯ ತಿಳಿಸಿದರು.
ನಗರದ ಐಜಿ ರಸ್ತೆಯಲ್ಲಿ ಕೆಳಗೂರು ಮಥಾಯಿಸ್ ಟವರ್ ಮೊದಲ ಮಹಡಿಯಲ್ಲಿ ನಿರ್ಮಿಸಲಾಗಿದ್ದ ಸಮಾನ ಪತ್ತಿನ ಸೌಹಾರ್ದ ಸಹಕಾರ ಸಂಘದ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸಹಕಾರಿ ಸಂಘಗಳು ಅವರ ಸದಸ್ಯರುಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಿ ಪ್ರಗತಿಯಲ್ಲಿ ಮುಂದುವರಿಯುತ್ತಿದೆ. ಮುಂದಿನ ವರ್ಷದಲ್ಲಿ ಇನ್ನೂ ಹೆಚ್ಚಿನ ಲಾಭಗಳಿಸಿ ಮತ್ತುಷ್ಟು ಪ್ರಗತಿ ಹೊಂದಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾನ ಪತ್ತಿನ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಕೆ.ಬಿ.ದೇವರಾಜ್ ಮಾತನಾಡಿ, ಸಂಘವು ಕಳೆದ ೧೦ ವರ್ಷಗಳಲ್ಲಿ ಆಡಳಿತ ಮಂಡಳಿ ಹಾಗೂ ಸರ್ವ ಸದಸ್ಯರ ಸಹಕಾರದೊಂದಿಗೆ ನೂತನ ಕಟ್ಟಡ ಹೊಂದಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಹೆಚ್ಚು ಲಾಭ ಗಳಿಸುವ ಮೂಲಕ ಸದಸ್ಯರಿಗೆ ಹೆಚ್ಚಿನ ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ. ೪೪.೫೮ ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಇದು ಕಳೆದ ವರ್ಷಕ್ಕಿಂತ ಶೇ. ೨೬ರಷ್ಟು ಹೆಚ್ಚಿನ ಲಾಭ ಗಳಿಸಲಾಗಿದೆ. ದುಡಿಯುವ ಬಂಡವಾಳ ೧೬.೩ ಕೋಟಿ ರೂ. ಇದ್ದು, ಪ್ರಸಕ್ತ ವರ್ಷ ಶೇ. ೧೨ರಷ್ಟನ್ನು ಸದಸ್ಯರಿಗೆ ಡಿವಿಡೆಂಟ್ ನೀಡಲಾಗಿದೆ ಎಂದರು.
ಬ್ಯಾAಕಿನ ಈ ನೂತನ ಕಟ್ಟಡದಲ್ಲಿ ಆಧುನಿಕತೆಗೆ ತಕ್ಕಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿದೆ. ಸದಸ್ಯರಿಗೆ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ, ಸೇವಾಕೇಂದ್ರ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೆ ಎಲ್ಲ ಸದಸ್ಯರು ಸಹಕರಿಸುವಂತೆ ಮನವಿ ಮಾಡಿದರು.
ಬ್ಯಾಂಕಿAಗ್ ಶಾಖೆಯನ್ನು ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಉದ್ಘಾಟಿಸಿದರು. ಆಡಳಿತ ಮಂಡಳಿ ಕಚೇರಿಯನ್ನು ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರ ಆಪ್ತ ಕಾರ್ಯದರ್ಶಿ ಕೆ.ಸಿ ವಿರೂಪಾಕ್ಷ ಉದ್ಘಾಟಿಸಿದರು. ಶರಣಗೌಡ ಜಿ ಪಾಟೀಲ್ ಭದ್ರತಾ ಕೊಠಡಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಉಪನಿಬಂಧಕಿ ಡಾ. ಡಿ.ಎಸ್ ತೇಜಸ್ವಿನಿ, ಆಡಳಿತ ಮಂಡಳಿ ನಿರ್ದೇಶಕರಾದ ಕೃಷ್ಣಮೂರ್ತಿ, ದೊಡ್ಡೇಗೌಡ, ಸೋಮಶೇಖರಪ್ಪ, ಬಾಲಕೃಷ್ಣ, ಜಯರಾಮೇಗೌಡ, ರವಿಕುಮಾರ್, ಚೇತನ್.ಜಿ ನಾಯಕ್, ಮಮತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವೈ.ವೆಂಕಟೇಶ್ ಉಪಸ್ಥಿತರಿದ್ದರು.