ಉಡುಪಿ: ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸೋಮವಾರ ಯಕ್ಷಶಿಕ್ಷಣ ತರಗತಿಯನ್ನು ಯಕ್ಷಗಾನ ಕಲಾರಂಗ ಕಾರ್ಯದರ್ಶಿ ಮುರಲಿ ಕಡೆಕಾರ್ ಉದ್ಘಾಟಿಸಿದರು.
ತೆಂಕನಿಡಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ವಿಶ್ವನಾಥ ಕರಬ ಅಭ್ಯಾಗತರಾಗಿದ್ದರು. ಇದೇ ಸಂದರ್ಭದಲ್ಲಿ ಶಾಲೆಯ ವಿವಿಧ ಸಂಘಗಳ ಉದ್ಘಾಟನೆ ನೆರವೇರಿತು. ಈ ಸಂದರ್ಭದಲ್ಲಿ ಯಕ್ಷಗುರು ರತ್ನಾಕರ ಶೆಣೈ, ನಿವೃತ್ತ ಪ್ರಾಂಶುಪಾಲೆ ತಾರಾ ಮೇಡಮ್, ರವಿರಾಜ ನಾಯಕ್, ಸಂಸತ ಅಧ್ಯಾಪಕ ವೆಂಕಟರಮಣ ಉಪಾಧ್ಯ, ಎಸ್.ಡಿ.ಎಂ.ಸಿ. ಸದಸ್ಯ ಪ್ರವಿಣ ಪೂಜಾರಿ ಮತ್ತು ವಸಂತಿ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಪೂರ್ಣಿಮಾ ಅಧ್ಯಕ್ಷತೆ ವಹಿಸಿದ್ದರು. ಗಣಪತಿ ಭಟ್ ಸ್ವಾಗತಿಸಿದರು. ಶಿವರಾಮ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರತಿಭಾ ನಾಯಕ್ ವಂದಿಸಿದರು. ವಿದ್ಯಾರ್ಥಿನಿ ಸನ್ನಿಧಿ ನಾಯಕ್ ಕಾರ್ಯಕ್ರಮ ನಿರೂಪಿಸಿದರು.