ಬಳ್ಳಾರಿಯ ಡಿಸಿ ಕಚೇರಿ ಆವರಣದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಅಧ್ಯಕ್ಷೆ ಎಂ.ಗೀತಾ, ಪದಾಧಿಕಾರಿಗಳಾಗದ ಪ್ರಮೋದ್, ಶಾಂತಾ, ರಾಜೇಶ್ವರಿ ಇತರರಿದ್ದರು 
ಜಿಲ್ಲೆ

ಪ್ರೋತ್ಸಾಹಧನ ಹೆಚ್ಚಿಸಿ ಬಜೆಟ್‌ನಲ್ಲಿ ಸೇರಿಸಿ

ಗಾಯತ್ರಿ ಮಾಲಿಪಾಟೀಲ್

ಬಳ್ಳಾರಿ: ಪ್ರೋತ್ಸಾಹ ಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಎಐಯುಟಿಯುಸಿ ಜಿಲ್ಲಾಧ್ಯಕ್ಷೆ ಎಂ.ಗೀತಾ ಮಾತನಾಡಿ, ಏಪ್ರೀಲ್‌ನಿಂದ ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಗೌರವಧನ ನೀಡಲಾಗುವುದು. ಇದನ್ನು ಹೊರತುಪಡಿಸಿ ಕಾಂಪೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚು ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್‌ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಿದ್ದಲ್ಲಿ, ಅಂಥ ಕಾರ್ಯಕರ್ತೆಯರಿಗೆ ಸರ್ಕಾರವೇ ಹಣ ಪಾವತಿಸಿ 10 ಸಾವಿರ ರೂ. ಗ್ಯಾರಂಟಿ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಪ್ರಸ್ತಕ ಸಾಲಿನ ಬಜೆಟ್‌ನಲ್ಲಿ ರಾಜ್ಯದ 2,50,000 ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂ. ಹೆಚ್ಚಿಸಿದಂತೆ 42000 ಆಶಾ ಕಾರ್ಯಕರ್ತೆಯರಿಗೂ 1000 ರೂ. ಹೆಚ್ಚಿಸಿ ಬಜೆಟ್‌ನಲ್ಲಿ ಸೇರಿಸಬೇಕು. ಕೂಡಲೇ ಆರೋಗ್ಯ ಸಚಿವರ ಸಮ್ಮುಖದಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಸುಗಮಕಾರರು ಮತ್ತು 60 ವರ್ಷದ ಆಶಾ ಕಾರ್ಯಕರ್ತೆಯರನ್ನು ಕೆಲಸಕ್ಕೆ ಪುನಃ ಸೇರಿಸಬೇಕು. ಜತೆಗೆ ಇನ್ನುಳಿದ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.