ಜಿಲ್ಲೆ

ಮಹಿಳಾ ಮೀಸಲಾತಿ ಶೇ.50ಕ್ಕೆ ಹೆಚ್ಚಿಸಿ

ಮರಿದೇವ ಹೂಗಾರ

ಹುಬ್ಬಳ್ಳಿ: ನಗರದ ಹುಬ್ಬಳ್ಳಿ ಲೆಕ್ಕಪರಿಶೋಧಕರ ಸಂಸ್ಥೆಯ ಐಸಿಎಐ ಭವನದಲ್ಲಿ ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.
ವಾಣಿಜ್ಯ ತೆರಿಗೆ ಇಲಾಖೆಯ ಆಡಿಟ್ ವಿಭಾಗದ ಉಪ ಆಯುಕ್ತೆ ಯಶೋಧಾ ಹೊಸೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತದ ಸಂವಿಧಾನವು ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಿದೆ. ಕಳೆದ 75 ವರ್ಷಗಳಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ಜೀವಿಸಲಾರಂಭಿಸಿದ್ದಾರೆ. ಹಾಗಾಗಿ ಮಹಿಳೆಯರು ಎಲ್ಲ ರಂಗದಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಮಹಿಳಾ ಮೀಸಲಾತಿ ಶೇ. 50ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಸಂಸ್ಥೆಯ ಚೇರ್ಮನ್ ಧನಪಾಲ ಮುನ್ನೋಳಿ, ಸೊಹಾನಿ ಪಟೇಲ್, ಅದಿತಿ ಪರಮಾರ್, ಇತರರು ಇದ್ದರು.