ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ

Haveri - Kariyappa Aralikatti

ಸವಣೂರ: ಸಾಲಬಾಧೆಯಿಂದ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಸಂಗಪ್ಪ ಮಹಾದೇವಪ್ಪ ಅರಳಿ (47) ಮೃತ ರೈತ.
ಇವರು ಬ್ಯಾಂಕ್‌ನಲ್ಲಿ 2.93 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಹಾಗೂ ರೇಷ್ಮೆ ಸಾಕಾಣಿಕೆ ಮಾಡಿದ್ದರು. ಆದರೆ, ಇದರಿಂದ ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.