ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಕಾಕೋಳ ತಾಂಡಾದಲ್ಲಿ ಗುರುವಾರ ನಡೆದಿದೆ.
ಮಲ್ಲೇಶಪ್ಪ ಟೋಪೆಪ್ಪ ಲಮಾಣಿ (40) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.