ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲಿಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಗ್ರಾಮದ ಗುಡ್ಡಪ್ಪ ನೀಲಪ್ಪ ವಡ್ಡರಹಳ್ಳಿ (70) ಮೃತ ರೈತ.
ಇವರು 2.9 ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ 10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಜಮೀನಿನಲ್ಲಿ ಬೆಳೆ ಸರಿಯಾಗಿ ಬಾರದೆ ನಷ್ಟ ಅನುಭವಿಸಿದ್ದರು. ಇದರಿಂದ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.