ಶಿಗ್ಗಾಂವಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಖುರ್ಸಾಪುರದಲ್ಲಿ ಶುಕ್ರವಾರ ನಡೆದಿದೆ.
ಯಲ್ಲಪ್ಪ ಶಂಕ್ರಪ್ಪ ವಡ್ಡರ (60) ಮೃತ ರೈತ.
ಇವರು ಕೃಷಿಗಾಗಿ ಬ್ಯಾಮಕ್ ಹಾಗೂ ವಿವಿಧ ಸಂಘಗಳಲ್ಲಿ 3.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಸಕಾಲಕ್ಕೆ ಮಳೆ ಬಾರದ ಕಾರಣ ಬೆಳೆ ಹಾಳಾಗಿತ್ತು. ಇದರಿಂದ ಬೇಸತ್ತು ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.