ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಲ್ಲೂರ ಬಡ್ನಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಸಿದ್ದಪ್ಪ ರಾಮಣ್ಣ ವಗ್ಗನವರ (55) ಮೃತ ರೈತ.
ಇವರು ಬ್ಯಾಂಕ್ ಹಾಗ ಕೈಡವಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಳೆ ಅಧಿಕವಾಗಿದ್ದರಿಂದ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.