ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾಕೋಳ ಗ್ರಾಮದಲ್ಲಿ ಗುರುವಾರ ನಡೆದಿದೆ.
ಹನುಮಂತಪ್ಪ ಗೂಳಪ್ಪ ಕರಬಣ್ಣನವರ (48) ಮೃತ ರೈತ.
ಇವರು ಕೃಷಿಗಾಗಿ ಬ್ಯಾಂಕ್ ಹಾಗೂ ಕೈಗಡವಾಗಿ 3.80 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಮಳೆ ಕೊರತೆಯಿಂದ ಬೆಳೆ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.