ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಶಿವಬಸಪ್ಪ ಶಿವರುದ್ರಪ್ಪ ಗಾಣಗೇರ (65) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ನಿರಂತರ ಮಳೆಯಿಂದ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.