ಜಿಲ್ಲೆ

ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ


ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಂಟಗಣಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಸಂತೋಷ ಸುಭಾಸ ಕರೆಮ್ಮನವರ (33) ಮೃತ ರೈತ.
ಇವರು ಬ್ಯಾಂಖ್‌ನಲ್ಲಿ 2 ಲಕ್ಷ ರೂ. ಸಾಲ ಮಾಡಿಕೊಂಡು ಮೆಕ್ಕೆಜೋಳ ಬೆಳೆದಿದ್ದರು. ಆದರೆ, ಮಳೆ ಬಾರದ ಕಾರಣ ಬೆಳೆ ಒಣಗಿ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.