ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ಪರಸಪ್ಪ ಬಸವರಾಜಪ್ಪ ತಳವಾರ (33) ಮೃತ ರೈತ.
ಇವರು ಬ್ಯಾಂಕ್‌ನಲ್ಲಿ ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿ ನಷ್ಟ ಅನುಭವಿಸಿದ್ದರು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.