ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ಕುಮುದ್ವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಪ್ಪರದಹಳ್ಳಿಯಲ್ಲಿ ಗುರುವಾರ ಸಂಭವಿಸಿದೆ.
ಬಸನಗೌಡ ಶಿವಪ್ಪ ಗೌಡರ (54) ಮೃತ ರೈತ.
ಇವರು 4 ಎಕರೆ ಜಮೀನು ಹೊಂದಿದ್ದು ಬ್ಯಾಂಕ್ ಹಾಗೂ ಕೈಗಡವಾಗಿ 4.35 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆ ಹಾಳಾಗಿದ್ದರಿಂದ ಮನನೊಂದು ಕುಮುದ್ವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.