ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೊಳೆಆನ್ವೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಪರಮೇಶಪ್ಪ ಪುಟ್ಟಪ್ಪ ಪೂಜಾರ (63) ಮೃತ ರೈತ.

ಇವರು ಬ್ಯಾಂಕ್​ನಲ್ಲಿ 1.30 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅತಿವೃಷ್ಟಿಯಿಂದ ಬೆಳೆ ಸರಿಯಾಗಿ ಬಾರದೆ ನಷ್ಟ ಅನುಭವಿಸಿದ್ದರು. ಇದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.