ಜಿಲ್ಲೆ

ಸಾಲಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ

Haveri - Kariyappa Aralikatti

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಗಸನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಹೆಗ್ಗಪ್ಪ ಕರಿಯಪ್ಪ ಕನ್ನಮ್ಮನವರ (58) ಮೃತ ರೈತ.
ಇವರು ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 28 ಸಾವಿರ ರೂ. ಸಾಲ ಪಡೆದುಕೊಂಡು ಲಾವಣಿ ರೂಪದಲ್ಲಿ 1 ಎಕರೆ ಜಮೀನಿನಲ್ಲಿ ಕೃಷಿ ಮಾಡಿದ್ದರು. ಆದರೆ, ಮಳೆ ಬಾರದ ಕಾರಣ ಬೆಳೆ ಒಣಗಿ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.