SHRISIYLA NAYAK 
ಜಿಲ್ಲೆ

ಜೂ.2 ರಿಂದ ಅನಿರ್ದಿಷ್ಟ ಧರಣಿ ಪ್ರಾರಂಭ

Raichur - Reporter - Rachhai Swamy

 ರಾಯಚೂರು ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸರ್ಕಾರಿ ನೌಕರರಂತೆ ವೇತನ, ಭತ್ಯೆ ನೀಡುವದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸಲು ಒತ್ತಾಯಿಸಿ ಜೂ.2 ರಿಂದ ನಗರದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಅನಿರ್ದಿಷ್ಟ ಧರಣಿ ಪ್ರಾರಂಭಿಸಲಾಗುತ್ತದೆಂದು ವಸತಿ ಶಾಲೆಗಳ ನೌಕರರ ಸಂಘದ ಜಿಲ್ಲಾಧ್ಯಕ್ಷ ಶ್ರೀಶೈಲ ನಾಯಕ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ನೌಕರರು ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಿಕ್ಷಣ ಸಂಸ್ಥೆಗಳಡಿ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ನೌಕರರಂತೆ ಕೆಲಸ ಮಾಡಿದರೂ ವೇತನ, ಭತ್ಯೆಯಲ್ಲಿ ವ್ಯತ್ಯಾಸವಿದೆ. ಕಾರಣ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಿ ಸರ್ಕಾರಿ ನೌಕರರಂದು ಪರಿಗಣಿಸಲು ಮೇ 26 ರಿಂದ 28 ವರೆಗೆ ಬೆಂಗಳೂರಿನ ಪ್ರೀಢಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗಿದೆ.

29 ರಂದು ಕಪ್ಪು ಪಟ್ಟಿ ಧರಿಸಿ ಸೇವೆ ನಿರ್ವಹಿಸಿದ್ದರು ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. 30 ರಂದು ತರಗತಿ ಬಹಿಷ್ಕರಿಸಿ ಪ್ರತಿಭಟನೆ, 31 ರಂದು ಮೌನ ಮೆರವಣಿಗೆ ನಡೆಸಲಾಗಿದೆ. ಯಾವುದೇ ಸಕರಾತ್ಮಕ ಸ್ಪಂದನೆ ಸರ್ಕಾರದಿಂದ ದೊರೆಯದೇ ಇರುವದರಿಂದ ಅನಿರ್ದಿಷ್ಟ ಧರಣಿಗೆ ಮುಂದಾಗಿರುವದಾಗಿ ಹೇಳಿದರು.

ಶಾಲೆಗಳು ಪ್ರಾರಂಭವಾಗುತ್ತಿದ್ದು ಮಕ್ಕಳ ಬೋಧನೆ ಕಾರ್ಯಕ್ಕೆ ಅಡ್ಡಿಯಾಗುತ್ತಿದ್ದರೂ ಸರ್ಕಾರ ಬೇಡಿಕೆಗಳಿಗೆ ಪರಿಗಣಿಸುತ್ತಿಲ್ಲ. ಅನಿವಾರ್ಯವಾಗಿ ಹೋರಾಟ ಮುಂದುವರೆಸಲಾಗುತ್ತಿದೆ. ಜಿಲ್ಲೆಯಲ್ಲಿ 366 ಖಾಯಂ ಹಾಗೂ 600 ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷ ರುದ್ರೇಶ, ಸಾಬುಗೌಡ, ರಾಧಾಕೃಷ್ಣ, ಶಾಂತಮೂರ್ತಿ ಇದ್ದರು.