ಗೋಳಿಯಂಗಡಿ: ಹೆಂಗವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮಾಧವ ಧ್ವಜಾರೋಹಣ ನೆರವೇರಿಸಿದರು.
ಹೆಂಗವಳ್ಳಿ ಗ್ರಾಪಂ ಅಧ್ಯಕ್ಷೆ ರಮ್ಯಾ, ಉಪಾಧ್ಯಕ್ಷ ಯೋಗೇಶ್ ಮಡಿವಾಳ, ನಿವೃತ್ತ ಮುಖ್ಯ ಶಿಕ್ಷಕ ರಘುರಾಮ ರೈ, ಎಸ್‌ಡಿಎಂಸಿ ಉಪಾಧ್ಯಕ್ಷೆ ಬೇಬಿ ಶೆಡ್ತಿ, ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ಶ್ರೀಧರ ಶೆಟ್ಟಿ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿರ್ದೇಶಕ ಸೀತಾರಾಮ ಶೆಟ್ಟಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಭೋಜ ಮಡಿವಾಳ, ಹೆಂಗವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಂಗ್ಲ ಮಾಧ್ಯಮ ಸಮಿತಿ ಕಾರ್ಯದರ್ಶಿ ಶಿವರಾಮ ಭಾಗವತ್, ಬಸ್ರೂರು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿವಿಯ ಪ್ರೇರಕಿ ಗೀತಾ, ಕೃಷ್ಣ ಮಂಡಾಡಿ, ರಾಜೇಶ್ವರಿ, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ ಶೆಟ್ಟಿ, ಶಿಕ್ಷಕ ವೃಂದವರು, ಎಸ್‌ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ 2 ಯುಪಿಎಸ್ ಬ್ಯಾಟರಿಗಳ ಕೊಡುಗೆ ನೀಡಿದ ವಿಜಯಕುಮಾರ್ ಶೆಟ್ಟಿ, ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆ ನೀಡಿದ ದಾನಿ ಸಂತೋಷ ಕುಮಾರ್ ಶೆಟ್ಟಿ ಕೆಳಮನೆ ಅವರನ್ನು ಗೌರವಿಸಲಾಯಿತು. ಶಿಕ್ಷಕ ಸತೀಶ್ ಎಚ್‌ಆರ್. ಸ್ವಾಗತಿಸಿದರು. ಮುಖ್ಯ ಶಿಕ್ಷಕ ನಾರಾಯಣ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಸಣ್ಣಯ್ಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕಿ ಗುಲಾಬಿ ವಂದಿಸಿದರು.