ಮೂಡುಬಿದಿರೆ: ಕ್ಷೇತ್ರದ ನಗರ ವ್ಯಾಪ್ತಿಯಲ್ಲಿ 258 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ, 4.50 ಕೋಟಿ ರೂ. ವೆಚ್ಚದ ತಾಪಂ ಕಟ್ಟಡ, 4.50 ಕೋಟಿ ರೂ.ವೆಚ್ಚದಲ್ಲಿ ಪ್ರವಾಸಿ ಬಂಗ್ಲೆ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದರು.
ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಡೆದ ಸ್ವಾತಂತ್ರೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಹಸೀಲ್ದಾರ್ ಶ್ರೀಧರ ಮುಂದಲಮನಿ ಧ್ವಜಾರೋಹಣಗೈದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಐದು ಮಂದಿ ಮಾಜಿ ಸೈನಿಕರನ್ನು ಗೌರವಿಸಲಾಯಿತು.
ಪುರಸಭೆ ಅಧ್ಯಕ್ಷೆ ಜಯಶ್ರೀ ಕೇಶವ, ಉಪಾಧ್ಯಕ್ಷ ನಾಗರಾಜ ಪೂಜಾರಿ, ಗ್ಯಾರಂಟಿ ಅನುಷ್ಠಾನ ತಾಲೂಕು ಅಧ್ಯಕ್ಷ ಅರುಣ್ ಕುಮಾರ ಶೆಟ್ಟಿ, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಅರಣ್ಯಾಧಿಕಾರಿ ಕಿರಣ್ ಕುಮಾರ್, ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಮತ್ತಿತರರಿದ್ದರು.
ಉಪತಹಸೀಲ್ದಾರ್ ರಾಮ ಕೆ.ನಿರೂಪಿಸಿದರು. ಪೊಲೀಸ್ ಉಪ ನಿರೀಕ್ಷಕಿ ಪ್ರತಿಭಾ ನೇತೃತ್ವದಲ್ಲಿ ಮೂಡುಬಿದಿರೆ ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಸ್ಕೌಟ್ಸ್-ಗೈಡ್ಸ್, ರೋವರ್ಸ್-ರೇಂಜರ್ಸ್ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು.