ಬಂಟ್ವಾಳ: ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನಡೆಯಿತು.
ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಬಂಟ್ವಾಳ ಪುರಸಭೆ ಉಪಾಧ್ಯಕ್ಷ ಮೂನಿಶ್ ಅಲಿ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಕೋಶಾಧಿಕಾರಿ ರಹೀಮ್, ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ, ಕಬೀರ್, ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್.ಎಚ್., ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಉಪಾಧ್ಯಕ್ಷ ಇಕ್ಬಾಲ್ ಇಝಾನ್, ಜತೆ ಕಾರ್ಯದರ್ಶಿ ಇರ್ಫಾನ್ ಕಾವಳಕಟ್ಟೆ, ಬಂಟ್ವಾಳ ಪುರಸಭೆ ಸದಸ್ಯ ಇದ್ರಿಸ್ ಪಿ.ಜೆ., ಬಂಟ್ವಾಳ ಪುರಸಭೆ ಸಮಿತಿ ಅಧ್ಯಕ್ಷ ಶರೀಫ್ ವಳವೂರು, ಬಿ.ಸಿ.ರೋಡ್ ಸಿಟಿ ಮುನ್ಸಿಪಲ್ ಸಮಿತಿ ಅಧ್ಯಕ್ಷ ಬಶೀರ್ ಪಲ್ಲ ಉಪಸ್ಥಿತರಿದ್ದರು.