ಜಿಲ್ಲೆ

ಸ್ವಾತಂತ್ರ್ಯ ದಿನಾಚರಣೆ 15ರಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ವತಿಯಿಂದ ನಗರದ ಆರ್​.ಎನ್​. ಶೆಟ್ಟಿ ಕ್ರೀಡಾಂಗಣದಲ್ಲಿ ಆ. 15ರಂದು ಬೆಳಗ್ಗೆ 9 ಗಂಟೆಗೆ 78ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ಅಬ್ಬಯ್ಯ ಪ್ರಸಾದ, ಭರಮಗೌಡ ಅಲಗೌಡ ಕಾಗೆ, ಜೆ.ಎನ್​.ಗಣೇಶ, ಮಹೇಶ ಟೆಂಗಿನಕಾಯಿ, ಎಂ.ಆರ್​.ಪಾಟೀಲ್​, ಎನ್​.ಎಚ್​ ಕೋನರಡ್ಡಿ, ಎಸ್​.ವಿ.ಸಂಕನೂರ, ಪ್ರದಿಪ ಶೆಟ್ಟರ, ಮೇಯರ್​ ರಾಮಪ್ಪ ಬಡಿಗೇರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ, ಇತರ ಅಧಿಕಾರಿಗಳು ಅತಿಥಿಗಳಾಗಿ ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ 4.30ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.