ಜಿಲ್ಲೆ

ದರ ನಿಯಂತ್ರಿಸಿದ್ದ ಯುಪಿಎ ಸರ್ಕಾರ

ಇಂಡಿ: ಇಂಧನ ಬೆಲೆ ಏರಿಕೆ ವಿರೋಧಿಸಿ ಶಾಸಕ ಯಶವಂತರಾಯಗೌಡ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಶಹಾ ಬಂಕ್ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಶಾಸಕ ಪಾಟೀಲ ಮಾತನಾಡಿ, ಕರೊನಾ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ಬೆಲೆ ಏರಿಸುತ್ತಿರುವುದು ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೇರಿದರೂ ದೇಶದಲ್ಲಿ ಮಾತ್ರ ಬೆಲೆಯನ್ನು ನಿಯಂತ್ರಿಸಿತ್ತು. ಈ ವಿಷಯದಲ್ಲಿ ಈಗಿನ ಸರ್ಕಾರ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿ ಹಳ್ಳಿಯಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.

ವಿಜಯಪುರ-ಬಾಗಲಕೋಟೆ ಹಾಲು ಒಕ್ಕೂಟದ ಅಧ್ಯಕ್ಷ ಸಂಬಾಜಿರಾವ ಮಿಸಾಳೆ ಮಾತನಾಡಿ, ದರ ಏರಿಕೆಯಿಂದ ಕೇವಲ ವಾಹನ ಹೊಂದಿದವರಿಗೆ ಮಾತ್ರ ಅಲ್ಲ, ರೈತರಿಗೂ ತೊಂದರೆಯಾಗುತ್ತಿದೆ ಎಂದರು.

ಪ್ರಶಾಂತ ಕಾಳೆ, ತಾಪಂ ಅಧ್ಯಕ್ಷ ಅಣ್ಣಪ್ಪ ಬಿದರಕೋಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಲಿಯಾಸ್ ಬೋರಾಮಣಿ, ಜಾವೀದ್ ಮೋಮಿನ್, ಅವಿನಾಶ ಬಗಲಿ ಮತ್ತಿತರರು ಮಾತನಾಡಿದರು.

ಪುರಸಭೆ ಸದಸ್ಯ ಲಿಂಬಾಜಿ ರಾಠೋಡ, ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ ಕುಡಿಗನೂರ, ತಾಪಂ ಮಾಜಿ ಅಧ್ಯಕ್ಷ ಅಣ್ಣಪ್ಪ ಬಿದರಕೋಟಿ, ಮುತ್ತಪ್ಪ ಪೋತೆ, ಮಲ್ಲು ಪಾಟೀಲ, ಸಿದರಾಯ ಐರೋಡಗಿ, ಶಾಂತು ಹದಗಲ್, ಶಿವಕುಮಾರ ಬಿಸನಾಳ, ಸಿದ್ದು ಬೇಲ್ಯಾಳ, ಜೀತಪ್ಪ ಕಲ್ಯಾಣಿ ಮತ್ತಿತರರು ಇದ್ದರು.