ಬೈಲಹೊಂಗಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು.
ಶಾಸಕ ಮಹಾಂತೇಶ ಕೌಜಲಗಿ ಹಾಗೂ ಎಸಿ ಪ್ರಭಾವತಿ ಕ್ಕೀರಪುರ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಜತೆಗೆ ದೇಶದ ಜನರ ನೆಮ್ಮದಿ ಬದುಕಿಗೆ ದಾರಿದೀಪವಾಗಿದೆ ಎಂದರು. ಇದೇ ವೇಳೆ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ತಹಸೀಲ್ದಾರ್ ಹನುಮಂತ ಶಿರಹಟ್ಟಿ, ಸಿಪಿಐ ಪಂಚಾರಿ ಸಾಲಿಮಠ, ಪುರಸಭೆ ಮುಖ್ಯಾಧಿಕಾರಿ ವೀರೇಶ ಹಸಬಿ,
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ ಉಳ್ಳೆಗಡ್ಡಿ, ಕಲಾವತಿ ದೇಶನೂರ ಇತರರಿದ್ದರು.