ಚಂದ್ರಯಾನ-3ರ ನೌಕೆ ಯಶಸ್ವಿಯಾಗಿ ಉಡಾವಣೆಯಾಗಿ ಚಂದ್ರನ ದಕ್ಷಿಣ ಭಾಗದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಉದ್ಯೋಗಿ ಚಿನ್ಮಯ್ ಹರ್ಷ ವ್ಯಕ್ತಪಡಿಸಿದರು.
ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯುವ ಮೂಲಕ ಇಸ್ರೋ ದಶಕಗಳ ಕನಸು ನನಸಾಗಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಕಾಲಿಟ್ಟ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಿದೆ. ಈ ಮೂಲಕ ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಟಿಸಿದ್ದಾರೆ ಎಂದು ತಿಳಿಸಿದರು.