ಪಡುಬಿದ್ರಿ: ದೇಶದಲ್ಲಿನ ಪ್ರತಿಭಾ ಪಲಾಯನ ತಡೆದು ಇಲ್ಲಿಯೇ ತಮ್ಮ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ ಬಲಿಷ್ಠ ಭಾರತ ನಿರ್ಮಾಣದತ್ತ ಸಾಗಬೇಕು ಎಂದು ತಹಸೀಲ್ದಾರ್ ಪ್ರತಿಭಾ ಆರ್. ಅಭಿಪ್ರಾಯಪಟ್ಟರು. ಕಾಪು ತಾಲೂಕು ಆಡಳಿತ ಹಾಗೂ ನಾಡಹಬ್ಬಗಳ ಆಚರಣಾ ಸಮಿತಿಯಿಂದ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು.
ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ನೇತೃತ್ವದಲ್ಲಿ ಪೊಲೀಸ್, ಎನ್‌ಸಿಸಿ, ಗೃಹರಕ್ಷಕ ದಳ, ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಆಕರ್ಷಕ ಪಥಸಂಚಲನ ನಡೆಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಇಲಾಖೆ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ವೃತ್ತನಿರೀಕ್ಷಕಿ ಜಯಶ್ರೀ ಮಾನೆ, ಪುರಸಭೆ ಮುಖ್ಯಾಧಿಕಾರಿ ನಾಗರಾಜ್, ತಾಲೂಕು ಯುವಜನ ಮತ್ತು ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ ಸೂಡ, ಕಸಾಪ ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಪುರಸಭಾ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಅನಿಲ್ ಕುಮಾರ್, ಶೈಲೇಶ್, ಹರಿಣಾಕ್ಷಿ, ಸತೀಶ್‌ಚಂದ್ರ, ಮೊಹಮ್ಮದ್ ಆಸೀಫ್, ನಾಗೇಶ್, ಸರಿತಾ ಶಿವಾನಂದ, ಅಮೀರ್ ಮೊಹಮ್ಮದ್, ಶೋಭಾ ಬಂಗೇರ, ರಾಧಿಕ, ಶಾಂತಲತಾ ಶೆಟ್ಟಿ, ಜೂಲಿಯಟ್, ಫರ್ಜಾನಾ ಉಪಸ್ಥಿತರಿದ್ದರು. ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಗೋಪಾಲಕೃಷ್ಣ ಗಾಂವ್ಕರ್ ಸ್ವಾಗತಿಸಿದರು. ಉಪನ್ಯಾಸಕಿ ಸುಚಿತ್ರಾ ಕಾರ್ಯಕ್ರಮ ನಿರೂಪಿಸಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ ವಂದಿಸಿದರು.