ಸಾಗರದಲ್ಲಿ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು. ನಾಗಪ್ಪ, ನಾಗೇಶ್ ಬ್ಯಾಲಾಳ್, ಕಲ್ಲಪ್ಪ ಮೆಣಸಿನಾಳ್, ಪರಮೇಶ್ವರಪ್ಪ, ಸುರೇಶ್, ಸ್ವಾಮಿ ಇತರರಿದ್ದರು. 
ಜಿಲ್ಲೆ

ಭಾರತದ ಪ್ರಜಾಪ್ರಭುತ್ವ ಜಗತ್ತಿಗೆ ಮಾದರಿ: ಗೋಪಾಲಕೃಷ್ಣ ಬೇಳೂರು

Shivamogga - Desk - Megha MS

ಸಾಗರ: ಜಗತ್ತಿನ ಅತ್ಯಂತ ಶ್ರೇಷ್ಠವಾದ ಸಂವಿಧಾನ ಎಂದರೆ ಅದು ಭಾರತದ್ದು. ಇದಕ್ಕೆ ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ನಗರದ ನಗರಸಭೆಯ ರಂಗಮAದಿರದಲ್ಲಿ ಶುಕ್ರವಾರ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಿಂದ ಆಯೋಜಿಸಿದ್ದ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿz, ಸಂವಿಧಾನ ನಮಗೆ ಸಮಾನತೆ, ಸಹೋದರತ್ವದಂತಹ ಮಹತ್ವದ ಸಂದೇಶವನ್ನು ನೀಡಿದೆ. ಸಂವಿಧಾನ ಅರಿಯದಿದ್ದಲ್ಲಿ ಪ್ರಜಾಪ್ರಭುತ್ವ ರಾಷ್ಟçದ ಯಶಸ್ವಿ ಪ್ರಜೆಗಳಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂವಿಧಾನ ಪೀಠಿಕೆ ಓದುವ ಮಹತ್ವದ ಯೋಜನೆ ಜಾರಿಗೆ ತಂದು ಸಂವಿಧಾನದ ಮಹತ್ವ ಅರಿತುಕೊಳ್ಳಲು ಅವಕಾಶ ಕೊಟ್ಟಿದೆ. ಯುವಕರು ಸಂವಿಧಾನದ ಆಶಯಕ್ಕೆ ತಕ್ಕಂತೆ ಬದುಕು ಕಟ್ಟಿಕೊಳ್ಳಬೇಕು. ಎಲ್ಲರು ಒಟ್ಟಾಗಿ ದೇಶದ ಏಳಿಗೆಗೆ ತೊಡಗಿಕೊಳ್ಳಬೇಕು ಎಂದರು.
ಸAವಿಧಾನ ಕುರಿತು ವಿಶೇಷ ಉಪನ್ಯಾಸ ನೀಡಿದ ಪತ್ರಕರ್ತ ಎಂ.ರಾಘವೇAದ್ರ, ಸಂವಿಧಾನ ಭಾರತದ ಪವಿತ್ರ ಗ್ರಂಥ. ಸ್ವಾತಂತ್ರö್ಯ, ಸಮಾನತೆ ಮತ್ತು ಸಹೋದರತ್ವ ಸಂವಿಧಾನದ ಅಡಿಗಲ್ಲು. ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಕಾರ್ಯಕ್ರಮ ಸಂವಿಧಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದ್ದು, ಸಂವಿಧಾನದ ವಿರುದ್ಧ ಮಾತನಾಡಿದರೆ ಅದು ಭಾರತದ ವಿರುದ್ಧ ಮಾತನಾಡಿದಂತೆ. ಸನಾತನ ಧರ್ಮದ ಬಗ್ಗೆ ಮಾತನಾಡಿದರೆ ಅವರ ವಿರುದ್ಧ ಪ್ರತಿಭಟನೆ ನಡೆಯುತ್ತದೆ. ಆದರೆ ಸಂವಿಧಾನವನ್ನೇ ಬದಲಾಯಿಸುವ ಹೇಳಿಕೆ ನೀಡಿದವರ ವಿರುದ್ಧ ಧ್ವನಿ ಎತ್ತದೆ ಇರುವುದು ದುರದೃಷ್ಟಕರ ಸಂಗತಿ.
ಕ್ಷೇತ್ರ ಶಿಕ್ಷಣಾಽಕಾರಿ ಪರಶುರಾಮ್ ಸಂವಿಧಾನ ಪೀಠಿಕೆ ಬೋಽಸಿದರು. ಪೌರಾಯುಕ್ತ ಎಚ್.ಕೆ.ನಾಗಪ್ಪ, ತಾಪಂ ಇಒ ನಾಗೇಶ್ ಬ್ಯಾಲಾಳ್, ಉಪ ತಹಸೀಲ್ದಾರ್ ಕಲ್ಲಪ್ಪ ಮೆಣಸಿನಾಳ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಿ.ಪರಮೇಶ್ವರಪ್ಪ, ಸಮಾಜ ಕಲ್ಯಾಣಾಽಕಾರಿ ಸುರೇಶ್, ವಿ.ಟಿ.ಸ್ವಾಮಿ ಇತರರಿದ್ದರು.

ಇತ್ತೀಚಿನ ದಿನಗಳಲ್ಲಿ ಯುವಜನರ ಮನಸ್ಸುಗಳಲ್ಲಿ ಜಾತಿಯ ವಿಷಬೀಜ ಬಿತ್ತಿ ಲಾಭ ಪಡೆಯುವ ಹುನ್ನಾರ ನಡೆಯುತ್ತಿದೆ. ದೇಶದಲ್ಲಿ ಲೋಕಸಭೆ, ವಿಧಾನಸಭೆ, ಪ್ರಧಾನ ಮಂತ್ರಿಗಳು, ರಾಷ್ಟçಪತಿಗಳಿಗಿಂತ ಸಂವಿಧಾನವೇ ಅತ್ಯಂತ ಶ್ರೇಷ್ಠ. ನಮ್ಮ ಸಂವಿಧಾನದ ಶ್ರೇಷ್ಠತೆಯನ್ನು ಮತ್ತು ಮಹತ್ವವನ್ನು ಜಗತ್ತೇ ಮೆಚ್ಚಿಕೊಂಡಿದೆ.|ಎಂ.ರಾಘವೇAದ್ರಪತ್ರಕರ್ತ