ಜಿಲ್ಲೆ

ಇಂದಿರಾ ಕ್ಯಾಂಟೀನ್ ಪರಿಶೀಲನೆ

ಬೇಲೂರು: ನಿರ್ಗತಿಕರು ಹಾಗೂ ಬಡವರಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ನೀಡಬೇಕು ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು.
ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ, ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲಿಸಿ ಮಾತನಾಡಿದ ಅವರು, ಕೆಲವರಿಗೆ ಊಟ-ತಿಂಡಿ ಸಿಗದೆ ಪರದಾಡುವಂತ್ತಾಗಿದೆ. ಅಂತಹವರಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ ಎಂದರು.

ಶುದ್ಧ ಹಾಗೂ ಬಿಸಿ ನೀರನ್ನು ಕಡ್ಡಾಯವಾಗಿ ನೀಡಬೇಕು. ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರು ಮೊದಲು ತಮ್ಮ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬೇಕು. ಜತೆಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ವಿತರಿಸಬೇಕು. ಪುರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ತಪಾಸಣೆ ನಡೆಸುವಂತೆ ಮುಖ್ಯಾಧಿಕಾರಿ ಮಂಜುನಾಥ್‌ಗೆ ಸೂಚಿಸಿದರು.
ಪುರಸಭೆ ಪರಿಸರ ಇಂಜಿನಿಯರ್ ಮಧುಸೂದನ್, ಸಿಬ್ಬಂದಿ ಇದ್ದರು.