ಕೆರೂರ: ಸ್ಥಳೀಯ ಇಂದಿರಾ ಕ್ಯಾಂಟೀನ್ ಕಾಮಗಾರಿ ಸಂಪೂರ್ಣ ಮುಗಿದಿದ್ದು, ಶೀಘ್ರದಲ್ಲೇ ಶಾಸಕ ಭೀಮಸೇನ ಚಿಮ್ಮನಕಟ್ಟಿ ಉದ್ಘಾಟಿಸಲಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಡಾ.ಎಂ.ಜಿ. ಕಿತ್ತಲಿ ಹೇಳಿದರು.
ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಕಾಂಪೌಂಡ್ ಕಾಮಗಾರಿಗೆ ಹಮ್ಮಿಕೊಂಡಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಡ, ಕೂಲಿ ಕಾರ್ಮಿಕರು ಖಾಸಗಿ ಹೋಟೆಲ್‌ಗಳ ದುಬಾರಿ ವೆಚ್ಚಕ್ಕೆ ತತ್ತರಿಸಿ ಹೋಗಿದ್ದಾರೆ. ಪಟ್ಟಣದಲ್ಲಿ ಆರಂಭವಾಗಲಿರುವ ಇಂದಿರಾ ಕ್ಯಾಂಟೀನ್‌ನಿಂದ ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಸಿಗಲಿದೆ ಎಂದರು.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸದಾನಂದ ಮದಿ ಮಾತನಾಡಿ, ಇಂದಿರಾ ಕ್ಯಾಂಟೀನ್‌ನಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಮೋದಿನಸಾಬ ಚಿಕ್ಕೂರ, ಸದಸ್ಯರಾದ ವಿಠ್ಠಲಗೌಡ ಗೌಡರ, ಬಸವರಾಜ ಹರಣಶಿಕಾರಿ, ನಾಮ ನಿರ್ದೇಶಿತ ಸದಸ್ಯರಾದ ಶ್ರೀಧರ ಕಾಂಬಳೆ, ಮುನಿಯಪ್ಪ ಚೂರಿ, ಮುಖ್ಯಾಧಿಕಾರಿ ರಮೇಶ ಮಾಡಬಾಳ, ಮುಖಂಡರಾದ ರಾಜು ಚೋರಗಸ್ತಿ ,ಮಂಜು ತಿಮ್ಮಾಪೂರ, ಸಿಬ್ಬಂದಿ ರಮೇಶ ಕಡ್ಲಿಮಟ್ಟಿ, ಸಂಗಮೇಶ ಮಾದರ, ಕಪಿಲ್ ಪ್ಯಾಟಿ ಇತರರು ಇದ್ದರು.