ಜಿಲ್ಲೆ

ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಿ

ಸಿರಿಗೆರೆ: ವಿದ್ಯಾರ್ಥಿಗಳು ಶಾಲೆಗಳಲ್ಲಿ ದೊರೆಯುವ ಶಿಕ್ಷಣದಿಂದ ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯುವ ಮೂಲಕ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಭಿಪ್ರಾಯಪಟ್ಟರು.

ಸಮೀಪದ ಕಡ್ಲೆಗುದ್ದು ಗ್ರಾಮದಲ್ಲಿನ ಇಂದಿರಾಗಾಂಧಿ ವಸತಿ ಶಾಲೆಗೆ ಈಚೆಗೆ ಭೇಟಿ ನೀಡಿದ ವೇಳೆ ಮಾತನಾಡಿ,

ಶಾಲೆಯಲ್ಲಿ ಉತ್ತಮ ವ್ಯಾಸಂಗ ಮಾಡಿದ ಮಕ್ಕಳು, ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿದ್ದಾರೆ ಎಂದರು.

ಜೀವನದಲ್ಲಿ ದೊಡ್ಡ ಗುರಿಯನ್ನು ಹೊಂದಿರಬೇಕು. ಅದರಂತೆ ಕಷ್ಟಪಟ್ಟು ಓದಿ ಸಾರ್ವಜನಿಕ ಸೇವೆ, ಉನ್ನತ ಹುದ್ದೆಗಳಲ್ಲಿ ತೊಡಗಿಸಿಕೊಳ್ಳಬೇಕು.

ಸಮಾಜ ಸೇವೆ ಮಾಡಬೇಕು ಎಂದು ತಿಳಿಸಿದರು. ಪ್ರಾಚಾರ್ಯ ರಮೇಶ, ವಸತಿ ಶಾಲೆಯ ನಿಲಯ ಪಾಲಕರು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ಗ್ರಾಮಸ್ಥರು ಹಾಜರಿದ್ದರು.