ಭದ್ರಾವತಿಯಲ್ಲಿ ಇಂದ್ರಧನುಷ್ ಲಸಿಕಾ ಅಭಿಯಾನಕ್ಕೆ ಶ್ರುತಿ ವಸಂತಕುಮಾರ್ ಚಾಲನೆ ನೀಡಿದರು. ಡಾ. ಎಂ.ವಿ.ಅಶೋಕ್, ಸರ್ವಮಂಗಳಾ ಭೈರಪ್ಪ, ಸುದೀಪ್ ಕುಮಾರ್, ಹೈದರ್ ಯೂಸಫ್, ಡಾ. ಅಚ್ಯುತ್ ಇತರರಿದ್ದರು. 
ಜಿಲ್ಲೆ

ವ್ಯಾಕ್ಸಿನ್ ವಂಚಿತರಿಗಾಗಿ ಇಂದ್ರಧನುಷ್ ಅಭಿಯಾನ

ಭದ್ರಾವತಿ: ವಿವಿಧ ಕಾರಣಗಳಿಂದಾಗಿ ಕೆಲವು ಪಾಲಕರು ನಿಗದಿತ ಸಮಯದಲ್ಲಿ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸದೆ ಸುಮ್ಮನಿರುತ್ತಾರೆ. ಅಂತಹ ಮಕ್ಕಳು ಮುಂದೆ ಹಲವಾರು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತವೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ನಗರಸಭೆ ಅಧ್ಯಕ್ಷೆ ಶ್ರುತಿ ವಸಂತಕುಮಾರ್ ತಿಳಿಸಿದರು.

ನಗರದ ಆರೋಗ್ಯ ಕೇಂದ್ರದಲ್ಲಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದ ಅವರು, ಸಮಾಜದ ಸ್ವಾಸ್ಥೃ ಕಾಪಾಡುವಲ್ಲಿ ಎಲ್ಲರ ಆರೋಗ್ಯ ಮುಖ್ಯವಾಗುತ್ತದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ.ಅಶೋಕ್ ಮಾತನಾಡಿ, ಮಕ್ಕಳ ಆರೋಗ್ಯ ಸುಧಾರಣೆಗಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅಂತಹ ಯೋಜನೆಗಳಲ್ಲಿ ಮಿಷನ್ ಇಂದ್ರಧನುಷ್ ಅಭಿಯಾನ ಸಹ ಒಂದಾಗಿದೆ. ತಾಲೂಕಿನಲ್ಲಿ ಲಸಿಕೆ ಪಡೆಯುವವರ ಸರ್ವೇ ಕಾರ್ಯ ನಡೆಸಲಾಗಿದ್ದು, 564 ಅರ್ಹ ಫಲಾನುಭವಿಗಳಿದ್ದಾರೆ ಎಂದು ವಿವರಿಸಿದರು.
ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳಾ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್, ಸದಸ್ಯ ಹೈದರ್ ಯೂಸಫ್, ವೈದ್ಯಾಧಿಕಾರಿ ಡಾ. ಅಚ್ಯುತ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆನಂದಮೂರ್ತಿ, ಸಂಪತ್‌ಕುಮಾರ್ ಇತರರಿದ್ದರು.