ಜಿಲ್ಲೆ

26ರಿಂದ ಕೈಗಾರಿಕಾ ವಿಚಾರಸಂಕಿರಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇದೇ ಪ್ರಥಮ ಬಾರಿಗೆ ಕೈಗಾರಿಕಾ ದಸರಾವನ್ನು ಸೆ.26ರಿಂದ 30ರವರೆಗೆ ಆಯೋಜಿಸಲಾಗಿದೆ. ಇದರ ಭಾಗವಾಗಿ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಕೈಗಾರಿಕಾ ವಿಚಾರಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ತಿಳಿಸಿದರು.


ಸೆ.26 ಮತ್ತು 27ರಂದು ಕೈಗಾರಿಕಾ ವಿಚಾರ ಸಂಕಿರಣವಿರಲಿದೆ. ಕಾರ್ಯಕ್ರಮದಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸ ಬಯಸುವವರು, ಈಗ ಕಾರ್ಯನಿರ್ವಹಿಸುತ್ತಿರುವ ಉದ್ದಿಮೆದಾರರಿಗೆ ಅನುಕೂಲವಾಗುವಂತೆ ಕೈಗಾರಿಕಾ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆ, ಬ್ಯಾಂಕ್ ಅಧಿಕಾರಿಗಳು ಅಗತ್ಯ ಮಾಹಿತಿ ನೀಡಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೆ.28ರಂದು ವೆಂಡರ್ ಡೆವಲಪ್‌ಮೆಂಟ್, 29 ಹಾಗೂ 30 ರಂದು ಕೈಗಾರಿಕಾ ಪ್ರವಾಸವನ್ನು ಉದ್ದಿಮೆದಾರರು, ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದೆ. ವಿಶೇಷವಾಗಿ ಮಹಿಳಾ ನಿರುದ್ಯೋಗಿಗಳಿಗೆ ಇದು ಅನುಕೂಲಕಾರಿಯಾಗಿದೆ. ಹೀಗಾಗಿ ಸ್ವಯಂ ಉದ್ಯೋಗ ಪ್ರಾರಂಭಿಸಲು ಇಚ್ಛಿಸುವವರು ನೋಂದಣಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಮೊ: 9916250557 ಸಂಪರ್ಕಿಸಬಹುದು ಎಂದರು. ಪ್ರಧಾನ ಕಾರ್ಯದರ್ಶಿ ವಿಜಯಶಂಕರ್, ಈಶ್ವರ್ ಚಕ್ಕಡಿ, ಶ್ರೀಧರ್, ಶಿವರಾಜು ಇದ್ದರು.