ಜಿಲ್ಲೆ

ಬಂಜೆತನ ನಿವಾರಣೆ: ವೈದ್ಯರುಗಳಿಗೆ ತರಬೇತಿ ಕಾರ್ಯಕ್ರಮ

reportermys

ಮಡಿಕೇರಿ: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸರಗೂರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕೊಡಗು ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಭಾಂಗಣದಲ್ಲಿ ಬಂಜೆತನ ನಿವಾರಣೆ ಕುರಿತಂತೆ ಕೊಡಗು ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವೈದ್ಯರುಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮವನ್ನು ಮಡಿಕೇರಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ಬಿ.ಕೆ.ರವೀಂದ್ರ ರೈರವರು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯು ಈಗಾಗಲೇ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದೆ. ಸಂಸ್ಥೆಯ ಕಾರ್ಯಕ್ರಮಗಳಿಗೆ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯೂ ಕೂಡಾ ಸಹಕಾರ ನೀಡುತ್ತಿದೆ. ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯು ಆಯೋಜಿಸುವ ಇಂತಹ ಕಾರ್ಯಕ್ರಮ ವೈದ್ಯರುಗಳು ಮತ್ತು ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಖಜಾಂಚಿ ಡಾ॥ ಕೆ.ಎನ್.ಚಂದ್ರಶೇಖರ್ ವಹಿಸಿದ್ದರು. ಮಡಿಕೇರಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಮುರುಳೀಧರ್, ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಅಂಕಾಚಾರಿ ಹಾಗೂ ಇತರೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.