officers visit 
ಜಿಲ್ಲೆ

ಇಲಿ, ಹೆಗ್ಗಣಗಳ ಪಾಲಾದ ಪಡಿತರ ಅಕ್ಕಿ!

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ನಗರದ ಬಸ್ ನಿಲ್ದಾಣ ಹಿಂಭಾಗದ ಆಹಾರ ಮತ್ತು ನಾಗರಿಕ ಇಲಾಖೆಯ ಗೋದಾಮಿಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಪ್ರಧಾನ ವ್ಯವಸ್ಥಾಪಕ ಪ್ರಸನ್ನಕುಮಾರ್ ನೇತೃತ್ವದ ಸಿಬ್ಬಂದಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಗೋದಾಮಿನಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲು ಸಂಗ್ರಹಿಸಿದ್ದ ಅಕ್ಕಿ ಇಲಿ, ಹೆಗ್ಗಣಗಳ ಪಾಲಾಗುತ್ತಿದೆ ಎಂದು ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ತಂಡ ಸಂಗ್ರಹಿಸಿದ್ದ ಅಕ್ಕಿ ಕುರಿತು ಮಾಹಿತಿ ಕಲೆಹಾಕಿತು.
ಸಾರ್ವಜನಿಕರು ದೂರು ನೀಡಿದ್ದರಿಂದ ಪರಿಶೀಲಿಸಿ, ಮಾಹಿತಿ ಸಂಗ್ರಹಿಸಲಾಗಿದೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಸನ್ನಕುಮಾರ್ ಪ್ರತಿಕ್ರಿಯೆ ನೀಡಿದರು.
ೆಟೋ ವೈರಲ್: ಸರ್ಕಾರದಿಂದ ಬಡವರಿಗೆ ನೀಡುವ ಅಕ್ಕಿಯನ್ನು ಸಮರ್ಪಕವಾಗಿ ರಕ್ಷಣೆ ಮಾಡದ ಕಾರಣ ಒಂದು ವರ್ಷದಿಂದ ಗೋದಾಮಿನಲ್ಲಿದ್ದ ಅಕ್ಕಿ ಇಲಿ, ಹೆಗ್ಗಣಗಳ ಪಾಲಾಗಿದೆ ಎಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕೆಲ ೆಟೋ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಗೋದಾಮನ್ನು ಸರಿಯಾದ ರೀತಿ ನಿರ್ವಹಣೆ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿ ವಿಫಲರಾಗಿದ್ದಾರೆ. ಆರೇಳು ಟನ್ ಅಕ್ಕಿ ವ್ಯರ್ಥ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದರು.