ಜಿಲ್ಲೆ

ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದವರಿಗೆ ಮಾಹಿತಿ

ಕೊಕ್ಕಡ: ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರ, ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆ, ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕೊಕ್ಕಡ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಭುವನೇಶ್ವರಿ ಮಾಹಿತಿ ನೀಡಿದರು.

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ರಕ್ತದ ಪರೀಕ್ಷೆ ಮಾಡಲಾಯಿತು. ಹಿಮೋಗ್ಲೋಬಿನ್ ಕಡಿಮೆ ಆಗಲು ಕಾರಣ, ಹಿಮೋಗ್ಲೋಬಿನ್ ಹೆಚ್ಚಿಸುವ ಆಹಾರ ಪದಾರ್ಥಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರ ಆಶಾ ಕಾರ್ಯಕರ್ತೆಯರಾದ ಚೈತ್ರಾ, ಗಾಯತ್ರಿ, ಶಾಲಾ ಶಿಕ್ಷಕ ವೃಂದದವರು ಜತೆಗಿದ್ದರು.